Published on: August 9, 2022

ಸ್ವ ಉದ್ಯೋಗ

ಸ್ವ ಉದ್ಯೋಗ

ಸುದ್ದಿಯಲ್ಲಿ ಏಕಿದೆ?

ರಾಜ್ಯದಲ್ಲಿ 28 ಸಾವಿರ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಾಂಶಗಳು

  • ಯೋಜನೆಯಡಿ ಪ್ರತಿ ಗ್ರಾಮದಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘ ರಚಿಸಿ, ಯುವಕರಿಗೆ ಆರ್ಥಿಕ ನೆರವು, ಬ್ಯಾಂಕ್‌ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು.
  • ‘ಸ್ತ್ರೀ ಸಾಮರ್ಥ್ಯ’ ಯೋಜನೆಯಡಿ, ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡಲಾಗುವುದು. ಇದಕ್ಕಾಗಿ ರೂ.1.50 ಲಕ್ಷ ನೀಡುವ ಜೊತೆಗೆ ಸುಲಭವಾಗಿ ಸಾಲಸೌಲಭ್ಯ ಒದಗಿಸಲು ಆಧಾರ್‌ ಸಂಖ್ಯೆ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡಲಾಗುವುದು. 5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಎಂಡ್‌ ಟು ಎಂಡ್‌ ನೆರವು ನೀಡಲಾಗುವುದು.

ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ

  • ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ವತಿಯಿಂದ ಒಗ್ಗೂಡಿಸಿ, ಉದ್ಯಮಶೀಲತ ತರಬೇತಿ ನೀಡಲಾಗುತ್ತದೆ.
  • ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ’ಯಡಿ .500 ಕೋಟೆ ಅನುದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಹಯೋಗದೊಂದಿಗೆ ರಚಿಸಲಾಗುವ ಗುಂಪು ಆಧಾರಿತ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ನೀಡಲಾಗುವುದು.ಬ್ಯಾಂಕ್ ಲಿಂಕ್ ಮೂಲಕ ಗುಂಪು ಆಧಾರಿತ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.
  • ಸರ್ಕಾರದಿಂದ ಪ್ರತಿ ಗುಂಪಿಗೆ ರೂ. 1.5ಲಕ್ಷವರೆಗೆ ಸಹಾಯಧನವನ್ನು ಒದಗಿಸಿ, ಅರ್ಹತೆಗೆ ಅನುಗುಣವಾಗಿ ರೂ. 10.00 ಲಕ್ಷದವರೆಗೆ ಕಿರು ಉದ್ಯಮ ಸ್ಥಾಪನೆಗಾಗಿ ಯೋಜನಾ ವರದಿ ಬ್ಯಾಂಕ್‌ಗೆ ಸಲ್ಲಿಸಿದ ನಂತರ ಒಂದು ತಿಂಗಳೊಳಗಾಗಿ ಬ್ಯಾಂಕ್‌ ಸಾಲ ವಿತರಿಸಲಾಗುವುದು.ಈ ಸಾಲದ ಮರುಪಾವತಿ ಅವಧಿಯನ್ನು 5 ರಿಂದ 7 ವರ್ಷದವರೆಗೆ ಸೀಮಿತಗೊಳಿಸಲಾಗುವುದು. ಪ್ರಾರಂಭದಲ್ಲಿ, ಆರು ತಿಂಗಳವರೆಗೆ ಸಾಲ ಮರುಪಾವತಿಗೆ ‘ರಜಾ ಅವಧಿ’ ಯಾಗಿರುತ್ತದೆ.

ಸ್ತ್ರೀ ಸಾಮರ್ಥ್ಯ ಯೋಜನೆ

  • ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ “ಸ್ತ್ರೀ ಸಾಮರ್ಥ್ಯ ಯೋಜನೆ”ಗೆ ಚಾಲನೆ ನೀಡಿದರು. ಈ ಯೋಜನೆಯನ್ನು ಎಂಡ್-ಟು -ಎಂಡ್ (End to End) ಮಾರ್ಗದಲ್ಲಿ ಕೈಗೊಳ್ಳಲಾಗುವುದು.
  • ರಾಜ್ಯದ ಸ್ತ್ರೀಯರ ಸಾಮರ್ಥ್ಯ ಜಗತ್ತಿಗೆ ತಿಳಿಸುವ ನಿಟ್ಟಿನಲ್ಲಿ ನೆರವಾಗುವ ಸ್ವ ಸಹಾಯ ಗುಂಪುಗಳ ಸಬಲೀಕರಣ್ಕಾಗಿ ರಾಜ್ಯ ಸರ್ಕಾರ ಸಂಜೀವಿನಿ-ಕೆಎಸ್ಆರ್ಎಲ್‌ಪಿಎಸ್ ಮತ್ತು ಇ-ಕಾಮರ್ಸ್ ಸಂಸ್ಥೆ ಮೀಶೋ ನಡುವೆ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ
  • ಮಹಿಳೆಯರಿಗಾಗಿ ‘ಸಾಮರ್ಥ್ಯ’ ಯೋಜನೆ ರಾಜ್ಯದ ಸ್ವಸಹಾಯ ಗುಂಪುಗಳನ್ನು ಕೆನರಾ ಬ್ಯಾಂಕ್ ಯೋಜನೆಗೆ ಆಯ್ದುಕೊಂಡಿದೆ.

ಉದ್ದೇಶ

  • ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತ ಸರ್ಕಾರದ ಜೀವನೋಪಾಯ ಕಾರ್ಯಕ್ರಮಗಳ ನೆರವಿನೊಂದಿಗೆ ಹಾಗೂ ಎಲಿವೇಟ್ ಯೋಜನೆ ಅಡಿಯಲ್ಲಿಯೂ ಸ್ತ್ರೀ ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ಒದಗಿಸುತ್ತಿದೆ.
  • ಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರು. ನೀಡುವ ಜತೆಗೆ ಸುಲಭವಾಗಿ ಸಾಲಸೌಲಭ್ಯ ಒದಗಿಸಲು ಆ್ಯಂಕರ್‌ ಬ್ಯಾಂಕ್‌ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆಸೌಲಭ್ಯ ನೀಡುವ ಯೋಜನೆಯಾಗಿದೆ. ಈ ಮೂಲಕ ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು.