Published on: April 9, 2024

1527ರ ವಿಜಯನಗರ ಕಾಲದ ಶಾಸನ ಪತ್ತೆ

1527ರ ವಿಜಯನಗರ ಕಾಲದ ಶಾಸನ ಪತ್ತೆ

ಸುದ್ದಿಯಲ್ಲಿ ಏಕಿದೆ? ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ಕಡೆಬಾಗಿಲು ಬೆಟ್ಟದ ಮೇಲ್ಭಾಗದಲ್ಲಿ 1527ರ ವಿಜಯನಗರ ಕಾಲದ ಶಾಸನ ಪತ್ತೆಯಾಗಿದ್ದು, ಶಾಸನವು ಎಂಟು ಸಾಲುಗಳಲ್ಲಿದ್ದು, ಆನೆಗೊಂದಿಯ ಮಹಾಪ್ರಧಾನ ಲಕ್ಕಿಶೆಟ್ಟಿಯ ಮಗನಾದ ವಿಜಯನಾಥನು ಬೆಟ್ಟದ ಮೇಲಿನ ವೀರಭದ್ರ ದೇವರನ್ನು ಆರಾಧಿಸಿದ ಸಂಗತಿ ಬರೆಯಲಾಗಿದೆ.

ಮುಖ್ಯಾಂಶಗಳು

  • ಪ್ರಾಸಂಗಿಕವಾಗಿ ಆನೆಗೊಂದಿಯನ್ನು ಹಸ್ತಿನಾವತಿ ಎಂದು ಅದು ಪಂಚಕೋಶ ಮಧ್ಯದಲ್ಲಿತೆಂದು ಹೇಳಲಾಗಿದೆ. ಅದಕ್ಕೆ ಕಿಷ್ಕಿಂಧೆ ಪರ್ವತ ಎನ್ನುವ ಹೆಸರು ಕೂಡ ಇತ್ತು ಎಂದು ಉಲ್ಲೇಖಿಸಿರುವುದು ಗಮನಾರ್ಹ ಸಂಗತಿಯಾಗಿದೆ’.
  • ‘ಆನೆಗೊಂದಿಯೇ ರಾಮಾಯಣ ಕಾಲದ ಕಿಷ್ಕಿಂಧೆ ಎಂದು ಗುರುತಿಸಲು ನೇರವಾಗಿ ಆನೆಗೊಂದಿಯಲ್ಲಿ ಯಾವ ಶಾಸನಗಳು ದೊರೆತಿರಲಿಲ್ಲ.
  • ದೇವಘಾಟ್ ಮತ್ತು ಹುಲಿಗಿಗಳ ಶಾಸನಗಳಲ್ಲಿ ಮಾತ್ರ ಕಿಷ್ಕಿಂಧೆ ಉಲ್ಲೇಖವಿತ್ತು. ಪ್ರಸ್ತುತ ಆನೆಗೊಂದಿಯ ಶಾಸನವೇ ಕಿಷ್ಕಿಂಧೆ ಪರ್ವತ ಎಂದು ಉಲ್ಲೇಖಿಸಿರುವುದು ಕಿಷ್ಕಿಂಧೆ ಮತ್ತು ಆಂಜನೇಯನ ಜನ್ಮಸ್ಥಳಗಳ ಬಗೆಗಿನ ವಾದ ವಿವಾದಗಳ ಸಂದರ್ಭದಲ್ಲಿ ಈ ಉಲ್ಲೇಖ ತುಂಬಾ ಮಹತ್ವ ಪಡೆದುಕೊಂಡಿದೆ’.
  • ‘ಆನೆಗೊಂದಿ ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿಯಾಗಿತ್ತು.
  • ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟವೇ ಆಂಜನೇಯನ ಜನ್ಮಸ್ಥಳವೆಂದು ಗುರುತಿಸಲು ಈ ಶಾಸನ ಮತ್ತೊಂದು ದಾಖಲೆಯಾಗಿದೆ’.

ಶಾಸನ 1449ನೇ ಶಕ ವರ್ಷದ್ದು: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಶೋಧಕ ಶರಣಬಸಪ್ಪ ಕೊಲ್ಕಾರ, “ಈ ಶಾಸನವನ್ನು ಪರಿಶೀಲಿಸಿದಾಗ 8 ಸಾಲುಗಳಲ್ಲಿದ್ದು, ಸ್ವಸ್ತಿ ಶ್ರೀ ಜಯದ್ ಉದಯ ಶಾಲಿವಾಹನ ಶಕ ವರ್ಷ 1449ನೇ ಕಾಲವನ್ನು ಉಲ್ಲೇಖಿಸಲಾಗಿದೆ. ಅದು ಪ್ರಸಕ್ತ ಶಕ 1527ಕ್ಕೆ ಸರಿಯಾಗುತ್ತದೆ.