Published on: November 1, 2021
2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ
2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ
ಸುದ್ಧಿಯಲ್ಲಿ ಏಕಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 66 ಸಾಧಕರನ್ನು ಗುರುತಿಸಲಾಗಿದೆ. ಜತೆಗೆ ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಪ್ರಶಸ್ತಿ ಪ್ರಕಟಿಸಲಾಗಿದೆ.
ಆಯ್ಕೆ ಹೇಗೆ ?
- ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನು ಪರಿಶೀಲಿಸಿ, ಹಾಗೂ ಎಲೆಮರೆಯ ಕಾಯಿಗಳಂತೆ ಸೇವೆ ಸಲ್ಲಿಸಿದ ಅನೇಕ ಮಹನೀಯರನ್ನು ಹುಡುಕಿ ಅವರ ಹೆಸರನ್ನು ಕೂಡ ಪ್ರಶಸ್ತಿ ಸಲಹಾ ಸಮಿತಿ ಮತ್ತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಪ್ರಶಸ್ತಿ ಆಯ್ಕೆ ಸಮಿತಿಗಳ ಮುಂದೆ ಇಡಲಾಗಿತ್ತು. ಅವುಗಳ ಸಮಗ್ರ ಪರಿಶೀಲನೆ ಬಳಿಕ ಆಯ್ಕೆ ಸಮಿತಿ ಕೆಲವು ಹೆಸರುಗಳನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ
ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ
- ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯಲ್ಲಿ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ನೀಡುತ್ತಿರುವುದು ವಿಶೇಷ. ಈ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಶೇಷವಾಗಿ ಪ್ರಶಸ್ತಿ ನೀಡಲಾಗುತ್ತಿದೆ. ಅದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿದೆ
ಸ್ವಾತಂತ್ರ್ಯದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ – 2021
- ಶ್ರೀ ವಿರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ, ಕರ್ನಾಟಕ ಹಿಮೋ ಫೀಲಿಯಾ ಸೊಸೈಟಿ- ದಾವಣಗೆರೆ, ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ, ಶ್ರೀ ರಾಮಕೃಷ್ಣಾಶ್ರಮ, ಮಂಗಳೂರು- ದಕ್ಷಿಣ ಕನ್ನಡ
- ಆಲ್ ಇಂಡಿಯಾ ಜೈನ್ ಯೂತ್ ಫೆಡರೇಷನ್- ಹುಬ್ಬಳ್ಳಿ, ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ, ಉತ್ಸವ ರಾಕ್ ಗಾರ್ಡನ್- ಹಾವೇರಿ, ಅದಮ್ಯ ಚೇತನ- ಬೆಂಗಳೂರು, ಸ್ಟೆಪ್ ಒನ್- ಬೆಂಗಳೂರು, ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು
ಕನ್ನಡ ರಾಜ್ಯೋತ್ಸವ
- ನವೆಂಬರ್ 1 ಕನ್ನಡ ರಾಜ್ಯೋತ್ಸವ ಕನ್ನಡಿಗರ ಹೆಮ್ಮೆಯ ಹಬ್ಬ. ಕರುನಾಡಿನ ಸ್ವಾಭಿಮಾನದ ಸಂಕೇತ. ನಮ್ಮ ಹೆಮ್ಮೆಯ ನಾಡು ರೂಪುಗೊಂಡ ದಿನವಿದು. ನವೆಂಬರ್ 1, 1956 ರಂದು ಮೈಸೂರು ಸಂಸ್ಥಾನವು ಹಿಂದಿನ ಮೈಸೂರು ಸಂಸ್ಥಾನದ ಬಹುತೇಕ ಪ್ರದೇಶವನ್ನು ಒಳಗೊಂಡಿತ್ತು. ಉತ್ತರ ಕರ್ನಾಟಕದ ಜನರು ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಒಲವು ತೋರಲಿಲ್ಲ. ಏಕೆಂದರೆ ಇದು ಹಿಂದಿನ ಸಂಸ್ಥಾನದ ಮತ್ತು ಹೊಸ ರಾಜ್ಯದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ತರ್ಕಕ್ಕೆ ಅನುಗುಣವಾಗಿ, ರಾಜ್ಯದ ಹೆಸರನ್ನು ಕರ್ನಾಟಕ ಎಂದು ನವೆಂಬರ್ 1 ರಂದು 1973 ರಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.