Published on: October 12, 2021

2021ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ

2021ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ

ಸುದ್ಧಿಯಲ್ಲಿ ಏಕಿದೆ? 2021ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಮೂವರು ಅಮೆರಿಕ ಮೂಲದ ಅರ್ಥಶಾಸ್ತ್ರಜ್ಞರು ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

  • ಕಾರ್ಮಿಕ ವರ್ಗದ ಆರ್ಥಿಕತೆಗೆ ಸಂಬಂಧಿಸಿದಂತೆ ಸಲ್ಲಿಸಿದ ಸೇವೆಗೆ ಡೇವಿಡ್ ಕಾರ್ಡ್ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯ ಇನ್ನುಳಿದ ಅರ್ಧ ಭಾಗವವನ್ನು ಜೋಶುವಾ ಮತ್ತು ಗ್ವಿಡೋ ನಡುವೆ ಹಂಚಿಕೆ ಮಾಡಲಾಗಿದೆ.
  • ಅದರಂತೆ ಮಸಾಚುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯ ಜೋಶುವಾ ಡಿ. ಅಂಗ್ರಿಸ್ಟ್ ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಯದ ಪ್ರಾಧ್ಯಾಪಕರಾದ ಗ್ವಿಡೋ ಡಬ್ಲೂ. ಇಂಬೆನ್ಸ್ ಅವರಿಗೆ ನೊಬೆಲ್ ಪ್ರಶಸ್ತಿಯ ಇನ್ನುಳಿದ ಅರ್ಧಭಾಗವನ್ನು ಹಂಚಿಕೆ ಮಾಡಲಾಗಿದೆ.
  • ಈ ಮೂವರು ಮಹನೀಯರು ಆರ್ಥಿಕ ವಿಜ್ಞಾನ ಕ್ಷೇತ್ರದಲ್ಲಿ ಕೈಗೊಳ್ಳಬಹುದಾದ ಪ್ರಯೋಗಿಕ ಕೆಲಸವನ್ನು ಮರುರೂಪಿಸಿದ್ದಾರೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
  • 2019ರಲ್ಲಿ ಕೂಡ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ, ಪತ್ನಿ ಎಸ್ತರ್ ಡಪ್ಲೋ ಮತ್ತು ಹಾರ್ವರ್ಡ್ ಪ್ರಾಧ್ಯಾಪಾಕ ಮೈಕೆಲ್ ಖ್ರೆಮರ್ ಅವರ ನಡುವೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ಹಂಚಿದ್ದನ್ನು ಇಲ್ಲಿ ಸ್ಮರಿಸಬಹುದು.