Published on: October 15, 2023

2023 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

2023 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಸುದ್ದಿಯಲ್ಲಿ ಏಕಿದೆ? ಅಮೇರಿಕಾದ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿರುವ  ಕ್ಲಾಡಿಯಾ ಗೋಲ್ಡಿನ್ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ.

ಮುಖ್ಯಾಂಶಗಳು

  • ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.
  • ಅವರು ಶತಮಾನಗಳಿಂದ ಮಹಿಳೆಯರ ಗಳಿಕೆ ಮತ್ತು ಅವರು ವಿವಿಧ ಕ್ಷೇತ್ರಗಳಲ್ಲಿ ಭಾಗವಹಿಸುವಿಕೆಯ ಮೊದಲ ಸಮಗ್ರ ಮಾಹಿತಿಯನ್ನು ಒದಗಿಸಿದ್ದಾರೆ. ಅವರ ಸಂಶೋಧನೆಯು ಲಿಂಗ ಅಂತರದ ಮೂಲ, ಬದಲಾವಣೆಯ ಕಾರಣಗಳನ್ನು ಬಹಿರಂಗಪಡಿಸುತ್ತದೆ.

ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

  • 1968 ರಲ್ಲಿ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಸ್ಥಾಪಿಸಿತು.
  • ಇದನ್ನು ಅಧಿಕೃತವಾಗಿ ಆಲ್ಫ್ರೆಡ್ ನೊಬೆಲ್ ಅವರ ಸ್ಮರಣಾರ್ಥವಾಗಿ ಅರ್ಥಶಾಸ್ತ್ರದಲ್ಲಿ ಸ್ವೆರಿಜಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ.
  • ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯು ಮೂಲ ನೊಬೆಲ್ ಪ್ರಶಸ್ತಿಗಳಲ್ಲಿ ಒಂದಲ್ಲ.
  • ಅರ್ಥಶಾಸ್ತ್ರಕ್ಕೆ 1969 ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ.
  • ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್‌ ಪಾತ್ರರಾಗಿದ್ದಾರೆ.
  • ಕಳೆದ ವರ್ಷದ ಅರ್ಥಶಾಸ್ತ್ರದ ಪ್ರಶಸ್ತಿಯನ್ನು ಬೆನ್ ಬರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್​​ಗೆ ನೀಡಲಾಗಿತ್ತು. ಬ್ಯಾಂಕ್ ವೈಫಲ್ಯಗಳು ಮತ್ತು 2007-2008 ರ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದ ಅಧ್ಯಯನಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿತ್ತು.

ನಿಮಗಿದು ತಿಳಿದಿರಲಿ

  • 1969 ರಲ್ಲಿ ರಾಗ್ನರ್ ಫ್ರಿಶ್ ಮತ್ತು ಜಾನ್ ಟಿನ್ಬರ್ಗೆನ್ ಅವರಿಗೆ ಅರ್ಥಶಾಸ್ತ್ರದಲ್ಲಿ ಮೊದಲ ನೊಬೆಲ್ ಬಹುಮಾನವನ್ನು  ನೀಡಲಾಯಿತು.
  • ನವೆಂಬರ್ 1933 ರಲ್ಲಿ ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಜನಿಸಿದ್ದ ಅಮರ್ತ್ಯ ಸೇನ್ ಅವರು ಅರ್ಥಶಾಸ್ತ್ರಕ್ಕೆ (welfare economics) ನೀಡಿದ ಕೊಡುಗೆಗಾಗಿ ಅವರಿಗೆ 1998 ರಲ್ಲಿ ಆರ್ಥಿಕ ವಿಜ್ಞಾನದಲ್ಲಿ ನೊಬೆಲ್ ಸ್ಮಾರಕ ಪ್ರಶಸ್ತಿಯನ್ನು ನೀಡಲಾಗಿತ್ತು.