Published on: November 6, 2021
5 ಪೌಂಡ್ನ ಹೊಸ ನಾಣ್ಯ
5 ಪೌಂಡ್ನ ಹೊಸ ನಾಣ್ಯ
ಸುದ್ಧಿಯಲ್ಲಿ ಏಕಿದೆ? ಮಹಾತ್ಮ ಗಾಂಧಿ ಸ್ಮರಣಾರ್ಥ ಅವರ ಜೀವನ ಮತ್ತು ಪರಂಪರೆ ಕೊಂಡಾಡುವ 5 ಪೌಂಡ್ನ ಹೊಸ ನಾಣ್ಯವನ್ನು ದೀಪಾವಳಿ ಹಬ್ಬದ ಅಂಗವಾಗಿ ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಅವರು ಅನಾವರಣಗೊಳಿಸಿದರು.
- ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಹಲವು ಮಾನದಂಡಗಳಲ್ಲಿ ಈ ನಾಣ್ಯ ಲಭ್ಯವಿದೆ. ಸಂಗ್ರಹ ಯೋಗ್ಯವಾದ ಈ ನಾಣ್ಯವನ್ನು ಹೀನಾ ಗ್ಲೋವರ್ ವಿನ್ಯಾಸಗೊಳಿಸಿದ್ದಾರೆ.
- ಗಾಂಧಿಯವರ ಅತ್ಯಂತ ಪ್ರಸಿದ್ಧ ಉಲ್ಲೇಖಗಳಲ್ಲಿ ಒಂದಾದ ‘ಮೈ ಲೈಫ್ ಈಸ್ ಮೈ ಮೆಸೇಜ್’ ಜೊತೆಗೆ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಒಳಗೊಂಡಿದೆ.
- ಈ ನಾಣ್ಯವು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ ಪ್ರಭಾವಿ ನಾಯಕನಿಗೆ ಸೂಕ್ತವಾದ ಗೌರವವಾಗಿದೆ