Published on: January 15, 2022

74ನೇ ಸೇನಾ ದಿನಾಚರಣೆ

74ನೇ ಸೇನಾ ದಿನಾಚರಣೆ

ಸುದ್ಧಿಯಲ್ಲಿ ಏಕಿದೆ ?  ಪ್ರತಿ ವರ್ಷ ಜನವರಿ 15ರಂದು ಭಾರತದಲ್ಲಿ ಸೇನಾ ದಿನ ಆಚರಿಸಲಾಗುತ್ತಿದೆ. ಯೋಧರಿಗೆ ಗೌರವ ಸಮರ್ಪಿಸುವ ಸಲುವಾಗಿ ದೇಶದ ಎಲ್ಲ ಸೇನಾ ಕಮಾಂಡ್‌ಗಳ ಪ್ರಧಾನ ಕಚೇರಿಗಳಲ್ಲಿ ಸೇನಾ ದಿನ ಆಚರಿಸಲಾಗುತ್ತದೆ.

ಜನವರಿ 15ರಂದೇ ಸೇನಾ ದಿನ ಏಕೆ?

  • ಫೀಲ್ಡ್ ಮಾರ್ಷಲ್ ಕೊಡಾಂಡೇರಾ ಎಂ. ಕಾರಿಯಪ್ಪ ಅವರ (ಆಗಿನ ಲೆಫ್ಟಿನೆಂಟ್ ಜನರಲ್) ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ ಭಾರತದಲ್ಲಿ ಪ್ರತಿವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. ಕೆ. ಎಂ.ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ 15 ಜನವರಿ 1949 ರಂದು ಅಧಿಕಾರ ವಹಿಸಿಕೊಂಡರು
  • ಜನರಲ್ ಸರ್ ಫ್ರಾನ್ಸಿಸ್ ಬುಚರ್ ಅವರು ಲೆಫ್ಟಿನೆಂಟ್ ಜನರಲ್ ಕೆ.ಎಂ.ಕಾರ್ಯಪ್ಪ ಅವರಿಗೆ ಬ್ಯಾಟನ್ ಹಸ್ತಾಂತರಿಸಿದ್ದರು.

ಐತಿಹಾಸಿಕ ಹಿನ್ನೆಲೆ

  • ಬ್ರಿಟಿಷರಿಂದ ಭಾರತಕ್ಕೆ ಅಧಿಕಾರದ ಹಸ್ತಾಂತರವು ಭಾರತದ ಇತಿಹಾಸದಲ್ಲಿ ಮತ್ತು ವಿದೇಶಿ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ಅತ್ಯಂತ ಪ್ರಮುಖ ಅಧ್ಯಾಯವಾಗಿದೆ.

ಈ ವರ್ಷ ಪ್ರದರ್ಶನದಲ್ಲಿ ಏನನ್ನು ನಿರೀಕ್ಷಿಸಬಹುದು?

  • ಡ್ರೋನ್‌ಗಳು, ಸುಧಾರಿತ ಲಘು ಹೆಲಿಕಾಪ್ಟರ್‌ಗಳು, ಭಾರತೀಯ ಸೇನೆಯು ಗಾಲ್ವಾನ್ ಸೆಕ್ಟರ್‌ನಲ್ಲಿ ನಿಯೋಜಿಸಲು ಯೋಜಿಸಿರುವ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಉತ್ಪಾದಿಸಿರುವ ಹೊಸ ಲಘು ಯುದ್ಧ ಹೆಲಿಕಾಪ್ಟರ್‌ಗಳು ಈ ಪ್ರದರ್ಶನದಲ್ಲಿ ಗಮನ ಸೆಳೆಯಲಿವೆ.
  • ಈ ದಿನವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತು ರಾಜ್ಯಗಳ ಎಲ್ಲಾ ಪ್ರಧಾನ ಕಚೇರಿಗಳಲ್ಲಿ ಮೆರವಣಿಗೆಗಳು ಮತ್ತು ಇತರ ಮಿಲಿಟರಿ ಪ್ರದರ್ಶನಗಳ ರೂಪದಲ್ಲಿ ಆಚರಿಸಲಾಗುತ್ತದೆ. ಇಂದು ಭಾರತ ತನ್ನ 74ನೇ ಭಾರತೀಯ ಸೇನಾ ದಿನವನ್ನು ಆಚರಿಸುತ್ತಿದೆ. ದೇಶ ಮತ್ತು ನಾಗರಿಕರನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಧೀರ ಸೈನಿಕರಿಗೆ ಗೌರವ ಸಲ್ಲಿಸಲು ಇಂದು ಪ್ರಮುಖ ದಿನವಾಗಿದೆ.
  • ಪರಮ ವೀರ ಚಕ್ರ ಮತ್ತು ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತರು ಪ್ರತಿವರ್ಷ ಸೇನಾ ದಿನದ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ.