Published on: July 4, 2025

ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆ

ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆ

ಸುದ್ದಿಯಲ್ಲಿ ಏಕಿದೆ? ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಮೃತಪಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಕಾರಣ ‘ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ’ ಹೃದ್ರೋಗ ಪತ್ತೆಗೆ ಆದ್ಯತೆ ನೀಡಿದ್ದು, ಎರಡು ವರ್ಷಗಳಲ್ಲಿ 7.49 ಲಕ್ಷ ಮಂದಿಗೆ ಇಸಿಜಿ ಪರೀಕ್ಷೆ (ಎಲೆಕ್ಟೋಕಾರ್ಡಿಯೋಗ್ರಾಮ್) ಮಾಡಲಾಗಿದೆ.

ಮುಖ್ಯಾಂಶಗಳು

  • ವ್ಯಕ್ತಿಗೆ ಹೃದಯಾಘಾತ ಸಂಭವಿಸಿದ ಒಂದು ಗಂಟೆ ನಿರ್ಣಾಯಕವಾಗಿರುತ್ತದೆ. ಆದ್ದರಿಂದ ಈ ಅವಧಿಯಲ್ಲಿ ತಾಲ್ಲೂಕು ಮಟ್ಟದಲ್ಲಿಯೇ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ‘ಸ್ಟೆಮಿ’ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಕಾರ್ಯಕ್ರಮದಡಿ ಈ ಯೋಜನೆ ಪ್ರಾರಂಭಿಸಲಾಗಿದೆ.
  • ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಕಾರಣ, ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
  • ಹೃದ್ರೋಗ ಸಮಸ್ಯೆ ಇರುವವರಿಗೆ ಆಯ್ದ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಇಸಿಜಿ ನಡೆಸಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ತೃತೀಯ ಹಂತದ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತಿದೆ.

ಯೋಜನೆಯ ಸಾಧಿತ ಗುರಿಗಳು

ಈ ಯೋಜನೆಯಡಿ 7,239 ತೀವ್ರ ಹೃದಯಾಘಾತ ಪ್ರಕರಣಗಳನ್ನು ಪತ್ತೆ ಮಾಡಿ, ಚಿಕಿತ್ಸೆ ನೀಡಲಾಗಿದೆ.

ಯೋಜನೆ ಮತ್ತು ಉದ್ದೇಶ

  • ಹೃದಯಾಘಾತದಿಂದ ಸಂಭವಿಸುತ್ತಿರುವ ಮರಣ ಪ್ರಕರಣಗಳನ್ನು ತಡೆಯುವುದು ಯೋಜನೆಯ ಉದ್ದೇಶವಾಗಿದೆ.
  • ಹೃದಯ ಸ್ತಂಭನದಿಂದ ಮೃತಪಟ್ಟ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ 2023ರ ಮಾರ್ಚ್‌ನಲ್ಲಿ ಮೊದಲ ಹಂತದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.
  • 2024ರ ಮಾರ್ಚ್‌ನಲ್ಲಿ ಎರಡನೇ ಹಂತದಲ್ಲಿ ರಾಜ್ಯದಾದ್ಯಂತ ಯೋಜನೆಯನ್ನು ವಿಸ್ತರಿಸಲಾಗಿದೆ.
  • ಹೃದಯ ಸ್ತಂಭನದಿಂದ ಮೃತಪಟ್ಟ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ 2023ರ ಮಾರ್ಚ್‌ನಲ್ಲಿ ಮೊದಲ ಹಂತದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.
  • 2024ರ ಮಾರ್ಚ್‌ನಲ್ಲಿ ಎರಡನೇ ಹಂತದಲ್ಲಿ ರಾಜ್ಯದಾದ್ಯಂತ ಯೋಜನೆಯನ್ನು ವಿಸ್ತರಿಸಲಾಗಿದೆ.
  • ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳ ಪ್ರಮಾಣವನ್ನು ಕಡಿಮೆ ಮಾಡುವುದು.
  • ಖಾಸಗಿ ಆಸ್ಪತ್ರೆಗಳಲ್ಲಿ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಗೆ 25,000 ರೂ. ಗಳಿಗಿಂತ ಹೆಚ್ಚು ಶುಲ್ಕ ವಿಧಿಸುತ್ತಿದ್ದರೆ, ಈ ಯೋಜನೆಯಡಿ ರೋಗಿಗಳಿಗೆ ಉಚಿತವಾಗಿ ನೀಡಲಾಗುತ್ತಿದೆ.

ಹಬ್ ಮತ್ತು ಸ್ಪೋಕ್ ಮಾದರಿ: ಯೋಜನೆಯಡಿ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಜತೆಗೆ ಖಾಸಗಿ ಆಸ್ಪತ್ರೆಗಳನ್ನೂ ಒಳಗೊಂಡ ಜಾಲವನ್ನು ರೂಪಿಸಲಾಗಿದೆ. ‘ಹಬ್ ಮತ್ತು ಸ್ಪೋಕ್’ ಮಾದರಿಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಹೃದಯಾಘಾತಕ್ಕೆ ಒಳಗಾದವರಿಗೆ ಯೋಜನೆಯಡಿ ನೋಂದಾಯಿತ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಒದಗಿಸಿ, ಹೃದಯ ನಾಳದ ಬ್ಲಾಕ್‌ ತೆರವುಗೊಳಿಸಲು ಚುಚ್ಚುಮದ್ದನ್ನು ನೀಡಲಾಗುತ್ತಿದೆ. ಬಳಿಕ ಕ್ಯಾಥ್‌ಲ್ಯಾಬ್‌ ಇರುವ ಆಸ್ಪತ್ರೆಗಳಿಗೆ ಕಳಿಸಲಾಗುತ್ತಿದೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಘಟಕವನ್ನು ಕಾರ್ಯಾಚರಣೆಯ ಕೇಂದ್ರಗಳನ್ನಾಗಿ ಬಳಸಿಕೊಂಡು, ಸೇವೆ ನೀಡಲಾಗುತ್ತಿದೆ.