ಆಶಾಕಿರಣ ಯೋಜನೆ
ಆಶಾಕಿರಣ ಯೋಜನೆ
ಸುದ್ದಿಯಲ್ಲಿ ಏಕಿದೆ? ಅಂಧತ್ವ ಮುಕ್ತ ಕರ್ನಾಟಕದ ಗುರಿಯೊಂದಿಗೆ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಶಾಕಿರಣ ಯೋಜನೆಯಡಿ 393 ಶಾಶ್ವತ ದೃಷ್ಟಿ ಕೇಂದ್ರಗಳನ್ನು ಉದ್ಘಾಟಿಸಲಾಗಿದೆ.
ಮುಖ್ಯಾಂಶಗಳು
- ಕಣ್ಣಿನ ಆರೈಕೆಗೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಒಂದು ಮಾದರಿ ಯೋಜನೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. ಯೋಜನೆಯನ್ನ ಅಧ್ಯಯನ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಕರ್ನಾಟಕಕ್ಕೆ ತಂಡವನ್ನು ಕಳುಸುತ್ತಿದೆ.
- ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ಧಪಡಿಸುತ್ತಿದ್ದು, ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು.
- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ 5 ಕೇಂದ್ರಗಳು Sight Savers India ರವರ ಸಿಎಸ್‌ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕಗ ವಿತರಣೆಗಳ ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
- OneSight Essilor Luxottica Foundation ಸೇರಿದಂತೆ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್‌ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿದೆ.
ಉದ್ದೇಶ
ಉಚಿತ ಕಣ್ಣಿನ ತಪಾಸಣೆ, ಕನ್ನಡಕ ಮತ್ತು ಪೊರೆ ಶಸ್ತ್ರಚಿಕಿತ್ಸೆ ಲಭ್ಯ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದ್ದು, ದೃಷ್ಟಿದೋಷ ಹೊಂದಿದವರು ತಪಾಸಣೆ ಮಾಡಿಸಿಕೊಂಡು, ಉಚಿತವಾಗಿ ಕನ್ನಡಕಗಳನ್ನ ಪಡೆಯಬಹುದಾಗಿದೆ. ಅಲ್ಲದೇ ಕಣ್ಣಿನ ಪೊರೆ ಶಸ್ತ್ರಚುಕಿತ್ಸೆಯನ್ನ ಉಚಿತವಾಗಿ ಕಲ್ಪಿಸಲಾಗುತ್ತಿದೆ.
ಯೋಜನೆಯ ಅನುಷ್ಟಾನ
ಆಶಾಕಿರಣ ಕಾರ್ಯಕ್ರಮದ ಎರಡು ಹಂತಗಳಲ್ಲಿ 8 ಜಿಲ್ಲೆಗಳಲ್ಲಿ ಒಟ್ಟು 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆ ಒಳಗಾಗಿದ್ದು, ಇವರಲ್ಲಿ 24.50 ಲಕ್ಷ ಜನರಿಗೆ ಹೆಚ್ಚಿನ ನೇತ್ರ ತಪಾಸಣೆಗೆ ಸಂಬಂಧಿಸಿದಂತೆ ತೊಂದರೆಗಳಿರುವುದು ಪತ್ತೆಯಾಗಿ, ಇವರನ್ನು ದ್ವಿತೀಯ ಹಂತದ ನೇತ್ರ ತಪಾಸಣೆಗೆ ಒಳಪಡಿಸಲಾಗಿರುತ್ತದೆ.
4.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದ್ದು ಉಳಿದ ಕನ್ನಡಕಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಹಾಗು ಒಟ್ಟು 1.05 ಲಕ್ಷ ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.
