Published on: July 4, 2025
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಚಟುವಟಿಕೆ
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಚಟುವಟಿಕೆ
ಸುದ್ದಿಯಲ್ಲಿ ಏಕಿದೆ? ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿನ ತಾಯಂದಿರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ವೈದ್ಯಕೀಯ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಬಲಪಡಿಸಲು ₹48 ಕೋಟಿಗೂ ಹೆಚ್ಚಿನ ಅನುದಾನವನ್ನು ಇನ್ಫೋಸಿಸ್ ಫೌಂಡೇಷನ್ ಒದಗಿಸಲಿದೆ.
ಮುಖ್ಯಾಂಶಗಳು
- ಇದಕ್ಕಾಗಿ, ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಜೊತೆ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.
- ಇದು ದುರ್ಬಲ ವರ್ಗಗಳ ಮಹಿಳೆಯರಿಗೆ, ಶಿಶುಗಳಿಗೆ ಮತ್ತು ಮಕ್ಕಳಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ಒದಗಿಸವಲು ಶ್ರೀ ಸತ್ಯಸಾಯಿ ಸರಳಾ ಸ್ಮರಣಾರ್ಥ ಆಸ್ಪತ್ರೆಗೆ ನೆರವು ನೀಡಲಿದೆ.
- ಅನುದಾನದಲ್ಲಿನ ಒಂದು ಭಾಗವು ಶಸ್ತ್ರ ಚಿಕಿತ್ಸಾ ವೆಚ್ಚಗಳನ್ನು ಒಳಗೊಂಡಿದೆ. ವಾರ್ಷಿಕ 8 ಸಾವಿರಕ್ಕೂ ಹೆಚ್ಚು ಜನ ಇದರ ಲಾಭ ಪಡೆದುಕೊಳ್ಳುವ ನಿರೀಕ್ಷೆ ಇದೆ.
ಉದ್ದೇಶ
ಕರ್ನಾಟಕದ ಗ್ರಾಮೀಣ ಪ್ರದೇಶಗಳ ತಾಯಂದಿರು ಮತ್ತು ಮಕ್ಕಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡುವ ಗುರಿ ಹೊಂದಲಾಗಿದೆ. ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಚಟುವಟಿಕೆಗಳನ್ನು ಇನ್ನೊಸಿಸ್ ಫೌಂಡೇಷನ್ ನಿರ್ವಹಿಸುತ್ತದೆ.
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಎಂದರೆ
- ಕಂಪನಿಗಳು ಸಮಾಜ ಮತ್ತು ಪರಿಸರದ ಮೇಲೆ ತಮ್ಮ ಚಟುವಟಿಕೆಗಳ ಪರಿಣಾಮದ ಬಗ್ಗೆ ಜವಾಬ್ದಾರರಾಗಿರುವುದು.
- ಕಂಪನಿಗಳ ಕಾಯ್ದೆ, 2013 ರ ಪ್ರಕಾರ, ಕೆಲವು ಕಂಪನಿಗಳು ತಮ್ಮ ಸರಾಸರಿ ನಿವ್ವಳ ಲಾಭದ ಕನಿಷ್ಠ 2% ಅನ್ನು ಸಿಎಸ್ಆರ್ ಚಟುವಟಿಕೆಗಳಿಗೆ ಖರ್ಚು ಮಾಡಬೇಕಾಗುತ್ತದೆ
- ಈ ಕಂಪನಿಗಳು ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಕೈಗೊಳ್ಳಬೇಕು ಮತ್ತು ಅದರ ಪ್ರಗತಿಯನ್ನು ವರದಿ ಮಾಡಬೇಕು
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಚಟುವಟಿಕೆಗಳು:
- ಪರಿಸರ ಸಂರಕ್ಷಣೆ: ತ್ಯಾಜ್ಯ ನಿರ್ವಹಣೆ, ಮಾಲಿನ್ಯ ನಿಯಂತ್ರಣ, ನವೀಕರಿಸಬಹುದಾದ ಶಕ್ತಿಯ ಬಳಕೆ.
- ಸಮುದಾಯ ಅಭಿವೃದ್ಧಿ: ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಬಡತನ ನಿರ್ಮೂಲನೆ.
- ನೈತಿಕ ಕಾರ್ಮಿಕ ಅಭ್ಯಾಸಗಳು: ಉದ್ಯೋಗಿಗಳಿಗೆ ನ್ಯಾಯಯುತ ವೇತನ ಮತ್ತು ಕೆಲಸದ ಪರಿಸ್ಥಿತಿಗಳನ್ನು ಒದಗಿಸುವುದು.
- ವಿಪತ್ತು ನಿರ್ವಹಣೆ: ಪ್ರವಾಹ, ಭೂಕಂಪಗಳಂತಹ ನೈಸರ್ಗಿಕ ವಿಕೋಪಗಳಲ್ಲಿ ಸಹಾಯ ಮಾಡುವುದು.
- ಸಂಸ್ಕೃತಿ ಮತ್ತು ಪರಂಪರೆ ಸಂರಕ್ಷಣೆ: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಮಾರಕಗಳ ಸಂರಕ್ಷಣೆ.
