Published on: July 2, 2025
ತರಂಗಿಣಿ ಕಾರ್ಯಕ್ರಮ
ತರಂಗಿಣಿ ಕಾರ್ಯಕ್ರಮ
ಸುದ್ದಿಯಲ್ಲಿ ಏಕಿದೆ? ಕರ್ನಾಟಕ ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ “ತರಂಗಿಣಿ” ಕಾರ್ಯಕ್ರಮದಡಿ ಅಲೆಕ್ಸಾ ಸಹಾಯಕ ಸಾಧನಗಳನ್ನು ವಿತರಿಸಲಾಗುತ್ತಿದೆ.
ಮುಖ್ಯಾಂಶಗಳು
- ಸ್ಟೇಟ್ ಸ್ಟ್ರೀಟ್ ಕಂಪನಿಯ ಸಿ.ಎಸ್.ಆರ್ ಅನುದಾನದೊಂದಿಗೆ ಯುನೈಟೆಡ್ ವೇ ಬೆಂಗಳೂರು (ಯುಡಬ್ಲ್ಯೂಬಿಇ) ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
- ತರಂಗಿಣಿ ಕಾರ್ಯಕ್ರಮನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಾರಂಭಿಸಿದೆ.
- ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಿತರಿಸಲಾಗುತ್ತಿದೆ
ಏನಿದು ಕಾರ್ಯಕ್ರಮ?
ತರಂಗಿಣಿ ಎನ್ನುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಒಂದು ಉಪಕ್ರಮವಾಗಿದೆ.
ಇದರ ಅಡಿಯಲ್ಲಿ, ಅರಿವು ಕೇಂದ್ರಗಳಲ್ಲಿ ಅಲೆಕ್ಸಾ ಸಹಾಯಕ ಸಾಧನಗಳನ್ನು ವಿತರಿಸಲಾಗುತ್ತದೆ.
ಯಾರಿಗೆ ಪ್ರಯೋಜನಕಾರಿ?
- ಈ ಕಾರ್ಯಕ್ರಮವು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಉಪಯುಕ್ತವಾಗಿದೆ. ವಿಶೇಷವಾಗಿ ದೃಷ್ಟಿ ಸವಾಲಿರುವವರಿಗೆ ಕೇಳುವಿಕೆಯೇ ಕಲಿಕೆಯ ವಿಧಾನವಾಗಿದೆ. ತಮ್ಮ ಧ್ವನಿಯನ್ನು ಬಳಸಿ ತಂತ್ರಜ್ಞಾನದೊಂದಿಗೆ ಸಂವಾದ ನಡೆಸಬಹುದು.
- ಅಲೆಕ್ಸಾದೊಂದಿಗೆ ವಿದ್ಯಾರ್ಥಿಗಳು ತಮ್ಮ ಕ್ಯಾಲೆಂಡರ್ನಲ್ಲಿ ಮುಂಬರುವ ಕಾರ್ಯಕ್ರಮಗಳನ್ನು ಟ್ರ್ಯಾಕ್ ಮಾಡಬಹುದು
- ಅಧ್ಯಯನ ಸಂಪನ್ಮೂಲಗಳನ್ನು ಪಡೆಯಬಹುದಲ್ಲದೆ ಮಾರ್ಗದರ್ಶನ, ಸಲಹೆಗಾರರ ಭೇಟಿಗೆ ಸಮಯ ಪಡೆಯಬಹುದು
ಉದ್ದೇಶ
- ಅಲೆಕ್ಸಾ ಸಹಾಯದಿಂದ, ಧ್ವನಿ ಮೂಲಕ ಮಾಹಿತಿಯನ್ನು ಪ್ರವೇಶಿಸಬಹುದು, ಅಧ್ಯಯನ ಸಂಪನ್ಮೂಲಗಳನ್ನು ಪಡೆಯಬಹುದು ಮತ್ತು ಮಾರ್ಗದರ್ಶನ ಪಡೆಯಬಹುದು. ಜನರು ಮಾಹಿತಿಯನ್ನು ಸುಲಭವಾಗಿ ಪ್ರವೇಶಿಸಲು ಮತ್ತು ಕಲಿಕೆಯನ್ನು ಸುಧಾರಿಸಲು ಸಾಧ್ಯವಾಗುತ್ತದೆ.
ಅರಿವು ಕೇಂದ್ರಗಳು:
- 2019–20 ರಲ್ಲಿ 5,623 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಆಡಳಿತಕ್ಕೆ ವರ್ಗಾಯಿಸಿ, 2021 ರಲ್ಲಿ ಅವುಗಳನ್ನು “ಅರಿವು ಕೇಂದ್ರ”ಗಳಾಗಿ ಪರಿವರ್ತನೆ ಮಾಡಿ ನಾಮಕರಣ ಮಾಡಲಾಯಿತು
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈಗಾಗಲೇ ಅರಿವು ಕೇಂದ್ರಗಳನ್ನು ವಿಶೇಷಚೇತನ ಸ್ನೇಹಿಯಾಗಿಸಲು ದರ್ಶಿನಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
- ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5888 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
